ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶಿಕ್ಷಕರು ನಡೆಸುತ್ತಿರುವ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ ಸಂಕನೂರ ಇಂದು ಭೇಟಿ ನೀಡಿ, ಬೆಂಬಲ ಸೂಚಿಸಿದರು.ಈ ವೇಳೆ ಮಾತನಾಡಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ನೌಕರರ ಹಾಗೂ ಆಡಳಿತ ಮಂಡಳಿ ಹೋರಾಟ ಸಮನ್ವಯ ಸಮಿತಿ,ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘಗಳಿಂದ ನಡೆಸುತ್ತಿರುವ ಧರಣಿ, ಉಪವಾಸ ಸತ್ಯಾಗ್ರಹ ಇಂದಿಗೆ ಎಂಟು ದಿನಕ್ಕೆ ಕಾಲಿಟ್ಟಿದೆ.ಇದಕ್ಕೆ ನಾನು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತೇನಿ ಎಂದರು.
ವಿವಿಧ ಜಿಲ್ಲೆಗಳ ಶಿಕ್ಷಕರ ಸಂಘಟನೆಗಳು ಡಿಸೆಂಬರ್15 ರವರೆಗೆ ಧರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
Kshetra Samachara
12/12/2020 12:53 pm