ಧಾರವಾಡ: ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶೈಲಜಾ ಹೂಗಾರ ಹಾಗೂ ನಿಜಗುಣೇಶ ಹೂಗಾರ ದಂಪತಿಯ ಪುತ್ರ ಸಿದ್ಧಲಿಂಗೇಶನಿಗೆ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಇಂದು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಜವಾಹರ ನವೋದಯ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯನ್ನು ಶೇ.94.25 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಈ ವಿದ್ಯಾರ್ಥಿ ನೀಟ್ ಪ್ರವೇಶ ಪರೀಕ್ಷೆಯಲ್ಲಿ 967ನೇ ರಾಂಕ್ ಪಡೆದಿದ್ದರು. ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಅವರು ಈ ವಿದ್ಯಾರ್ಥಿಗೆ ಮೊದಲ ವರ್ಷದ ಎಂಬಿಬಿಎಸ್ ಪಠ್ಯಪುಸ್ತಕ, ಎಪ್ರಾನ್, ಸ್ಟೆತೋಸ್ಕೋಪ್ ಕೊಡುಗೆಯಾಗಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ಸೇರಿದಂತೆ ಮಹಿಳಾ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.
Kshetra Samachara
15/12/2020 08:29 pm