ಹುಬ್ಬಳ್ಳಿ : ಪದವಿ,ಸ್ನಾತಕೋತ್ತರ,ಡಿಪ್ಲೋಮಾ,ತಾಂತ್ರಿಕ,ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2019-20 ನೇ ಸಾಲಿನಲ್ಲಿ ವಿತರಣೆಯಾಗಿರುವ ರಿಯಾಯಿತಿ ಬಸ್ ಪಾಸುಗಳ ಅವಧಿಯನ್ನು ಡಿ.10 ರವರೆಗೆ ಮಾನ್ಯ ಮಾಡಲಾಗಿತ್ತು.
ಸದರಿ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸುಗಳ ಮಾನ್ಯತೆ ಅವಧಿಯನ್ನು ಡಿ.31ರ ವರೆಗೆ ವಿಸ್ತರಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ.
ಈ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಬಗ್ಗೆ ಈ ವರ್ಷದ ಶುಲ್ಕ ಪಾವತಿ ರಶೀದಿ ಹಾಗೂ 2019- 20 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ತಮ್ಮ ವಾಸಸ್ಥಳದಿಂದ ಕಾಲೇಜಿಗೆ ಹೋಗಿ ಬರಲು ಪಾಸಿನಲ್ಲಿ ನಮೂದಿಸಿದ ಮಾರ್ಗದಲ್ಲಿ ಸಂಸ್ಥೆಯ ನಗರ ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
Kshetra Samachara
18/12/2020 07:57 pm