ಧಾರವಾಡ: ಎನ್.ಎ.ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಮಾಡುವುದರ ಜೊತೆಗೆ ಆ ಶಾಲೆ ಆರಂಭಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಡಿ.5 ರಂದು ಧಾರವಾಡ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ವಿಧಾನ ಪರಿಷತ್ ಸದಸ್ಯ ಬಸವರ ಹೊರಟ್ಟಿ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ 2020-21 ನೇ ಸಾಲಿನಲ್ಲಿ 125 ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರ ಪೈಕಿ 80 ವಿದ್ಯಾರ್ಥಿಗಳು ಪ್ರವೇಶ ಪಡೆದು ಆನ್ ಲೈನ್ ತರಗತಿಗಳಿಗೆ ಹಾಜರಾಗಿದ್ದಾರೆ. ಆದರೆ ಕಳೆದ 9 ತಿಂಗಳಿಂದ ಶಾಲೆಯ ಶಿಕ್ಷಕರಿಗೆ ವೇತನವೇ ನೀಡಿಲ್ಲ ಎಂದು ದೂರಿದರು.
ಈ ಶಾಲೆ ಉಳಿಸಲು ಸಿಎಂ ಭೇಟಿಯಾಗಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಹಾಗೂ ಶಾಲೆಯ ಅನುದಾನ ಬಿಡುಗಡೆ ಮಾಡಲು ಕೋರಿದರೂ ಈವರೆಗೂ ಸ್ಪಂದನೆ ಲಭಿಸಿಲ್ಲ. ಈ ಕಾರಣದಿಂದ ಬೇಸತ್ತು ಡಿ.5 ರಿಂದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕಾಲ್ಪನಿಕ ವೇತನಕ್ಕಾಗಿ ನಮ್ಮ ನೇತೃತ್ವದಲ್ಲಿ ಸಮಗ್ರವಾಗಿ ಪರಿಶೀಲಿಸಿ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿರುವ ವರದಿಯನ್ನು ಜಾರಿಗೊಳಿಸಬೇಕು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದರು.
Kshetra Samachara
21/11/2020 01:29 pm