ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಧಾರವಾಡದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆಯುತ್ತಲೇ ಇವೆ. ಇಷ್ಟಾದರೂ ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಕ್ರಮ ಕೈಗೊಂಡಿಲ್ಲ 777 ಚಾರ್ಲಿ ಸಿನಿಮಾ ನೋಡಿ ಕಣ್ಣೀರಿಟ್ಟ ನಮ್ಮ ರಾಜ್ಯದ ಮುಖ್ಯಮಂತ್ರಿಗಳು, ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಕಿಂಚಿತ್ತೂ ಕಣ್ಣೀರು ಹಾಕಿಲ್ಲ. ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಯಾರಿಗೂ ರಕ್ಷಣೆ ನೀಡಲಿಕ್ಕಾಗದು ಎನ್ನುವ ಮಾತು ಹೇಳುತ್ತಾರೆ. ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡದೇ ಇದ್ದರೆ ಹೇಗೆ?
ರಾಜ್ಯದಲ್ಲಿ ಗಲಭೆ ಸೃಷ್ಠಿಸುತ್ತಿರುವ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಬೇಕು. ಹಿಂದೂ ಕಾರ್ಯಕರ್ತರ ಕೊಲೆ ಮರುಕಳಿಸದಂತೆ ನೋಡಿಕೊಳ್ಳಬೇಕು. ಬಿಜೆಪಿ ಸರ್ಕಾರ ಇದೇ ರೀತಿ ತನ್ನ ದುರಾವರ್ತನೆ ತೋರಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
Kshetra Samachara
30/07/2022 12:57 pm