ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಾಲೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪ್ರತಿಭಟನೆ

ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಬೇರೆ ಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದ 1,38,00 ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಆ ಶಾಲೆಗಳನ್ನು ಮುಚ್ಚಿ ಅವುಗಳನ್ನು ಬೇರೆ ಶಾಲೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ. ಇದರಿಂದ ಸರ್ಕಾರಿ ಶಾಲೆಗಳು ಮುಚ್ಚಿದಂತಾಗುತ್ತದೆ ಹೀಗಾಗಿ ಸರ್ಕಾರ ಈ ನಿರ್ಧಾರವನ್ನು ಕೈಬಿಟ್ಟು ಯಥಾಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳನ್ನು ಮುಂದುವರೆಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Edited By :
Kshetra Samachara

Kshetra Samachara

29/07/2022 03:21 pm

Cinque Terre

18.35 K

Cinque Terre

1

ಸಂಬಂಧಿತ ಸುದ್ದಿ