ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಹೆಚ್ಚುವರಿ ಆಯುಕ್ತರು ಇವರೇ ನೋಡಿ

ಧಾರವಾಡ: ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ನೂತನ ಅಪರ ಆಯುಕ್ತರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ರಮೇಶ ದೇಸಾಯಿ ಬುಧವಾರ ಅಧಿಕಾರ ವಹಿಸಿಕೊಂಡರು.

ಈ ಹುದ್ದೆಯಲ್ಲಿದ್ದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಅಧಿಕಾರ ಹಸ್ತಾಂತರಿಸಿ ನೂತನ ಹೆಚ್ಚುವರಿ ಆಯುಕ್ತರಿಗೆ ಶುಭ ಕೋರಿದರು. 2006 ರಲ್ಲಿ ಕೆಎಎಸ್ ತೇರ್ಗಡೆಯಾದ ದೇಸಾಯಿ ಅವರು ಬೈಲಹೊಂಗಲ, ಸಿಂಧನೂರ ಹಾಗೂ ಚಿಕ್ಕೋಡಿ ತಾಲೂಕುಗಳ ತಹಶೀಲ್ದಾರರಾಗಿ ಸೇವೆ ಸಲ್ಲಿಸಿದ್ದಾರೆ.

ಅಸಿಸ್ಟಂಟ್ ಕಮೀಷನರ್(ಎಸಿ) ಹುದ್ದೆಯ ವೃಂದಕ್ಕೆ ಪದೋನ್ನತಿ ಹೊಂದಿದ ಇವರು, ಗದಗ ಉಪವಿಭಾಗಾಧಿಕಾರಿಯಾಗಿ, ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ, ಗದಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಯೋಜನಾ ನಿರ್ದೇಶಕರಾಗಿ, ಹುಬ್ಬಳ್ಳಿ ವಿದ್ಯುಚ್ಛಕ್ತಿ ಪ್ರಸರಣ ನಿಗಮದ (ಹೆಸ್ಕಾಂ) ಪ್ರಧಾನ ವ್ಯವಸ್ಥಾಪಕರಾಗಿ ಸೇವೆಸಲ್ಲಿಸಿದ್ದಾರೆ.

ನಿಕಟ ಪೂರ್ವದಲ್ಲಿ ಹಾವೇರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದರು.

Edited By : Nagaraj Tulugeri
Kshetra Samachara

Kshetra Samachara

03/02/2021 10:15 pm

Cinque Terre

23.38 K

Cinque Terre

2

ಸಂಬಂಧಿತ ಸುದ್ದಿ