ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಾಳೆಯಿಂದಲೂ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ವರದಿ ನೀಡಿದ್ದು, ಮುಂಜಾಗೃತೆಯಾಗಿ ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು ಸಂಜೆ ನೂತನ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
Kshetra Samachara
19/11/2021 06:04 pm