ಹುಬ್ಬಳ್ಳಿ : ಕಲೆಯುತ್ತಿರುವ ಕಾಲೇಜಿನಿಂದ ಬೇರೆ ಕಾಲೇಜಿಗೆ ವಿದ್ಯಾರ್ಥಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಹುಬ್ಬಳ್ಳಿ ಹೊರವಲಯದಲ್ಲಿರುವ ತಾರಿಹಾಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಒಂದು ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ. ನಾವೆಲ್ಲರೂ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿದ್ದೇವೆ. ಏಕಾಏಕಿ ಬೇರೆ ಕಾಲೇಜಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದರೇ ನಮ್ಮ ಶೈಕ್ಷಣಿಕ ಭವಿಷ್ಯದ ಗತಿ ಏನು ಎಂದು ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳ ಪ್ರತಿಭಟನೆ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ಕುರಿತು ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಶಾಂತಗೊಳಿಸಲು ಹರಸಾಹಸ ಪಟ್ಟಿರುವುದು ಕಂಡುಬಂದಿದ್ದು, ಕೂಡಲೇ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು ನಾವು ಸರ್ಕಾರಿ ಪಾಲಿಟೆಕ್ನಿಕ್ ತಾರಿಹಾಳ ಕಾಲೇಜಿನಲ್ಲಿಯೇ ನಮ್ಮ ಶೈಕ್ಷಣಿಕ ಜೀವನ ಮುಂದುವರೆಸುವುದಾಗಿ ಪಟ್ಟು ಹಿಡಿದರು.
Kshetra Samachara
04/03/2022 02:25 pm