ಕುಂದಗೋಳ: ಮಾ.28 ರಿಂದ ಏಪ್ರಿಲ್ 11 ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಕುಂದಗೋಳ ತಾಲೂಕಿನ 36 ಪ್ರೌಢ ಶಾಲಾ ಮಕ್ಕಳಿಗಾಗಿ ಎಲ್ಲೆಡೆ ಪರೀಕ್ಷಾ ಕೇಂದ್ರಗಳ ಸಿದ್ಧತೆಗಳು ಜೋರಾಗಿವೆ.
ಪ್ರಸಕ್ತ ವರ್ಷ ಕುಂದಗೋಳ ತಾಲೂಕಿನಲ್ಲಿ ಒಟ್ಟು 2,355 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಒಂದು ಆಸನ ಒಬ್ಬ ವಿದ್ಯಾರ್ಥಿಗೆ ಮಾತ್ರ ಸೀಮಿತವಾಗಿರಲಿದೆ.
ಕುಂದಗೋಳ ತಾಲೂಕಿನಲ್ಲಿ ಒಟ್ಟು 124 ಪರೀಕ್ಷಾ ಕೊಠಡಿ, 124 ಜನ ಸುಪರವೈಸರ್, 5 ಜನ ರೂಟ್ ಆಫೀಸರ್, 8 ಜನ ಮೊಬೈಲ್ ಸ್ವಾಧೀನ ಅಧಿಕಾರಿಗಳು, ಒಂದು ಪರೀಕ್ಷಾ ಕೊಠಡಿಗೆ 3 ಜನ ವೈದ್ಯಕೀಯ ಸಿಬ್ಬಂದಿ, ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ದೈಹಿಕ ಶಿಕ್ಷಕರು ಮಕ್ಕಳನ್ನು ನಿಭಾಯಿಸಲು ಕರ್ತವ್ಯದಲ್ಲಿ ಇರಲಿದ್ದಾರೆ.
ಇದಲ್ಲದೆ ಪರೀಕ್ಷೆಗೆ ಹಾಜರಾದ ಎಲ್ಲಾ ಮಕ್ಕಳಿಗೂ ಇಸ್ಕಾನ್‌ನಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ 13 ಜನ ವಿಶೇಷ ಚೇತನ ಮಕ್ಕಳಿಗೆ ಪರೀಕ್ಷಾ ಸಮಯ ಹೆಚ್ಚಿಗೆ ಇರಲಿದೆ.
ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಅಪರಾಹ್ನ 1-30ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮಕ್ಕಳಿಗೆ ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ, ಜೊತೆ ಶೌಚಾಲಯ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗಿದೆ.
Kshetra Samachara
27/03/2022 10:05 am