ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವರಾಗಿ ಡಾ. ಸಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ ಮಾಡಿದರು.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ. ಬಿ. ಗುಡಸಿ ಹಾಗೂ ಕುಲಸಚಿವರಾದ ಯಶಪಾಲ ಕ್ಷೀರಸಾಗರ ಅವರು ಹೂಗುಚ್ಛ ನೀಡಿ ಸ್ವಾಗತಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಶ್ಯಾಮಕುಮಾರ, ಡಾ. ಜಿ ಎಸ್ ವೇಣುಮಾಧವ, ಡಾ. ಮಲ್ಲಿಕಾರ್ಜುನ ಪಾಟೀಲ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಜೆ.ಎಂ ಚಂದುನವರ, ಸಹಾಯಕ ಪ್ರಾಧ್ಯಾಪಕ ಡಾ. ಸಂಜಯ ಕುಮಾರ ಮಾಲಗತ್ತಿ, ಸೇರಿದಂತೆ ಹಲವರು ಭಾಗಿಯಾಗಿದ್ದರು.
Kshetra Samachara
06/06/2022 04:12 pm