ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ನವಲಗುಂದ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಾರ್ಮಿಕ ಇಲಾಖೆ ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ನವಲಗುಂದ ಪಟ್ಟಣದ ತಾಲೂಕ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

"ಕಾರ್ಮಿಕ ಪದ್ಧತಿಯನ್ನು ಕೊನೆಗೊಳಿಸಲು ಸಾರ್ವತ್ರಿಕ ಸಾಮಾಜಿಕ ರಕ್ಷಣೆ" ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಹಿರಿಯ ದಿವಾಣಿ ನ್ಯಾಯಾಧೀಷರು ಮಂಜುನಾಥ್ ಡಿ. ಆರ್ ಹಾಗೂ ದಿವಾಣಿ ನ್ಯಾಯಾದೀಶರು ಸಂತೋಷ ಎಂ ಎಸ್ ಅವರು ಚಾಲನೆ ನೀಡಿದರು. ಈ ವೇಳೆ ಆರು ಮತ್ತು ಏಳನೇ ತರಗತಿಯ ವಿದ್ಯಾರ್ಥಿಗಳು ಭಾಗಿಯಾಗಿ ಬಾಲ ಕಾರ್ಮಿಕ ವಿರೋಧದ ಬಗ್ಗೆ ಮಾತನಾಡಿದರು.

ಈ ಸಂಧರ್ಭದಲ್ಲಿ ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ ಎಸ್ ಮಾಯಾಚಾರ್ಯ, ಕಾರ್ಮಿಕ ಇಲಾಖೆ ಹಿರಿಯ ನೀರಿಕ್ಷಕ ಮಹಮ್ಮದ್ ಅಕ್ರಮ ಹುಸೇನಮಿಯಾ ಅಲ್ಲಾಪುರ, ಕಾರ್ಮಿಕ ಸಂಘದ ಅಧ್ಯಕ್ಷ ಲಕ್ಷಣ ಗುಡಾರದ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಪೂರ್ಣಿಮಾ ಆಚಾರಿ, ವಿದ್ಯಾರ್ಥಿಗಳು, ಶಿಕ್ಷಕರು, ವಕೀಲರು, ಕಾರ್ಮಿಕರು ಸೇರಿದಂತೆ ಹಲವರು ಇದ್ದರು.

Edited By : PublicNext Desk
Kshetra Samachara

Kshetra Samachara

14/06/2022 10:13 am

Cinque Terre

14.43 K

Cinque Terre

0

ಸಂಬಂಧಿತ ಸುದ್ದಿ