ನವಲಗುಂದ : ರಾಜ್ಯಾದ್ಯಂತ ಸೋಮವಾರದಿಂದ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆಯು ಮೊದಲ ದಿನ ಯಶಸ್ವಿಯಾಗಿ ನಡೆದಿತ್ತು. ಎರಡನೇ ದಿನವಾದ ಮಂಗಳವಾರ ಕನ್ನಡ ಭಾಷೆ ಪರೀಕ್ಷೆಯು ಸಹ ನವಲಗುಂದ ಪಟ್ಟಣದಲ್ಲಿ ಯಶಸ್ವಿಯಾಗಿ ಅಂತ್ಯಗೊಂಡಿದೆ.
ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ನಲ್ಲಿ ನಡೆದ ಪ್ರಥಮ ಭಾಷೆಯಾದ ಕನ್ನಡ ಪರೀಕ್ಷೆಯನ್ನು ವಿದ್ಯಾರ್ಥಿಗಳು ಉತ್ಸಹದಿಂದ ಬರೆದರು. ಇನ್ನು ಒಟ್ಟು 212 ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರಲ್ಲಿ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 206, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಈ ವೇಳೆ ಪರೀಕ್ಷಾ ಕೇಂದ್ರದ ಆವರಣದಲ್ಲಿ ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸಲಾಗಿತ್ತು. ಹಾಗೂ ಪೊಲೀಸ್ ಬಂದೋಬಸ್ತ್ ಅನ್ನು ಸಹ ನಿಯೋಜಿಸಲಾಗಿತ್ತು.
Kshetra Samachara
28/06/2022 03:26 pm