ನವಲಗುಂದ : ನವಲಗುಂದ ತಾಲೂಕಿನ ನಾಗನೂರ ಗ್ರಾಮದ ಶಾರದಾ ಆಂಗ್ಲ ಮಾಧ್ಯಮ ಶಾಲೆಗೆ 2021-22 ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಭಾಜನವಾಗಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪುರಸ್ಕಾರ ಪ್ರಮಾಣ ಪತ್ರ ಪ್ರದಾನ ಮಾಡಿದರು. ಪುರಸ್ಕಾರ ಪ್ರಮಾಣ ಪತ್ರ ಸ್ವೀಕರಿಸಿದ ನಂತರ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಪುಷ್ಪಾ ಹಿರೇಮಠ ಮಾತನಾಡಿ, ಸ್ವಚ್ಛ ವಿದ್ಯಾಲಯ ಪುರಸ್ಕಾರ ಲಭಿಸಿದ್ದು, ವಿದ್ಯಾಲಯದ ಶೈಕ್ಷಣಿಕ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದೆ ಎಂದು ಹೇಳಿದರು.
ಶಾಲೆಯ ಸಾಧನೆಗೆ ನವಲಗುಂದ ಕ್ಷೇತ್ರದ ಶಾಸಕರು ಜವಳಿ, ಸಕ್ಕರೆ ಸಚಿವರು ಹಾಗೂ ರಾಯಚೂರು-ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಆದ ಶಂಕರ ಪಾಟೀಲ ಮುನೇನಕೊಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
Kshetra Samachara
02/07/2022 03:10 pm