ನವಲಗುಂದ : ನವಲಗುಂದ ತಾಲ್ಲೂಕಿನ ತಿರ್ಲಾಪೂರ ಗ್ರಾಮದ ಸರಕಾರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಸಿದ್ದಲಿಂಗಪ್ಪ ಅಂಗಡಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ, ಸೇವೆಯಿಂದ ಅಮಾನತ್ತು ಮಾಡಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಒತ್ತಾಯ ಮಾಡಿದರು.
ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಮಾಯಾಚಾರ್ಯ ಅವರಿಗೆ ಮನವಿ ಸಲ್ಲಿಸಿದ ಮಾಬುಸಾಬ ಯರಗುಪ್ಪಿ, ತಿರ್ಲಾಪುರ ಶಾಲೆಯ ಮಕ್ಕಳಿಗೆ ನಿರಂತರ ಕಿರುಕುಳ ಕೊಡುತ್ತಿದ್ದ ಸಿದ್ದಲಿಂಗಪ್ಪ ಅಂಗಡಿಯವರನ್ನು ಬೇರೆ ಶಾಲೆಗೆ ವರ್ಗಾವಣೆ ಅಷ್ಟೇ ಮಾಡದೇ, ಕರ್ತವ್ಯ ದುರುಪಯೋಗ ಮತ್ತು ಮುಖ್ಯ ಶಿಕ್ಷಕನ ಅತಿರೇಕದ ವರ್ತನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
31/07/2022 09:11 am