ಧಾರವಾಡ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸುಮಾರು 2 ಕಿಲೋ ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದ್ದಾರೆ.
ಧಾರವಾಡದ ಕಡಪಾ ಮೈದಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡು ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಿದರು. ಈ ಮೆರವಣಿಗೆಯು ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಮರಳಿ ಕಡಪಾ ಮೈದಾನಕ್ಕೆ ಬಂದು ಮುಕ್ತಾಯಗೊಂಡಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/08/2022 02:32 pm