ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎರಡನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ: ಅಸ್ವಸ್ಥಗೊಂಡ ವಿದ್ಯಾರ್ಥಿ

ಧಾರವಾಡ: ಲ್ಯಾಪ್‌ಟಾಪ್ ವಿತರಣೆ ಮಾಡುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ವೇಳೆ ಗಣಪತಿ ಎಂಬ ವಿದ್ಯಾರ್ಥಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಲ್ಯಾಪ್‌ಟಾಪ್ ವಿತರಣೆ ಮಾಡಲು ಕವಿವಿ ವಿಳಂಬ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ಲ್ಯಾಪ್‌ಟಾಪ್ ವಿತರಣೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಿನ್ನೆಯಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದು ಧರಣಿ ವೇಳೆ ಗಣಪತಿ ಎಂಬ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದರಿಂದ ಆತನನ್ನು ಅಂಬ್ಯುಲೆನ್ಸ್‌ ಮೂಲಕ ಚಿಕಿತ್ಸೆಗೆಂದು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Edited By :
Kshetra Samachara

Kshetra Samachara

30/08/2022 06:08 pm

Cinque Terre

22.75 K

Cinque Terre

1

ಸಂಬಂಧಿತ ಸುದ್ದಿ