ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಸದೃಢ ದೇಶ ಕಟ್ಟಲು ಸಾಧ್ಯ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಶಿಕ್ಷಕರು ಪ್ರಾಮಾಣಿಕ ಸೇವೆಯಿಂದ ಸದೃಢ ದೇಶ ಕಟ್ಟಲು ಸಾಧ್ಯ. ಗೌರವಯುತ ಹಾಗೂ ಶ್ರೇಷ್ಠ ಸ್ಥಾನಮಾನ ಹೊಂದಿರುವ ಶಿಕ್ಷಕರು ತಮ್ಮ ಅರ್ಪಣಾ ಮನೋಭಾವದ ಸೇವೆಯ ಮೂಲಕ ವೃತ್ತಿಯ ಘನತೆಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬದವರಾಜ ಹೊರಟ್ಟಿ ಹೇಳಿದರು.

ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಇಂದು ಇಲ್ಲಿನ ಅಂಜುಮನ್ ರಾಯಲ್ ಹಾಲ್‌ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರಾದ ಡಾ.ಎಸ್.ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯನ್ನು ಬಲವಾಗಿ ಪ್ರೀತಿಸಿ,ಅದರ ಮೌಲ್ಯ,ಗೌರವ ಹೆಚ್ಚಿಸಿದರು.ಶಿಕ್ಷಕರು ಪ್ರಾಮಾಣಿಕ ಸೇವೆ ಸಲ್ಲಿಸಿ,ಮಕ್ಕಳ ಭವಿಷ್ಯ ರೂಪಿಸುವ ಜೊತೆಗೆ ರಾಷ್ಟ್ರ ನಿರ್ಮಿಸುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಮೈತುಂಬಾ ಕಣ್ಣುಗಳನ್ನಾಗಿಸಿಕೊಂಡು ಶಿಕ್ಷಕರು ತಮ್ಮ ಕರ್ತವ್ಯ ನಿರ್ವಹಿಸಿದರೆ. ದೇಶದ ಸ್ವರೂಪ ಬದಲಿಸಲು ಸಾಧ್ಯವಿದೆ. ಕನ್ನಡ ಮಾಧ್ಯಮದ ಶಾಲೆಗಳ ಶಿಕ್ಷಕರು ಎದುರಿಗೆ ಹೆಚ್ಚು ಸವಾಲುಗಳಿವೆ. ಅವುಗಳನ್ನು ಸಮರ್ಥವಾಗಿ ಎದುರಿಸಿ ಶಾಲೆಗಳನ್ನು ,ಮಕ್ಕಳನ್ನು ಕಟ್ಟಿ ಬೆಳೆಸಬೇಕು. ಗುರು ಭವನಕ್ಕೆ ಸೂಕ್ತ ನಿವೇಶನ ಗುರುತಿಸಿ ,ತೋರಿಸಿದರೆ ಉತ್ತಮ ಗುರುಭವನ ನಿರ್ಮಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಸಂಘಟನೆಗಳ ಪದಾಧಿಕಾರಿಗಳು ಸಾಂಘಿಕ ಪ್ರಯತ್ನ ಮಾಡಬೇಕು ಎಂದರು.

Edited By : Nagaraj Tulugeri
Kshetra Samachara

Kshetra Samachara

05/09/2022 02:36 pm

Cinque Terre

31.9 K

Cinque Terre

1

ಸಂಬಂಧಿತ ಸುದ್ದಿ