ನವಲಗುಂದ: ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ತಾಲೂಕಿನ ಶಿರೂರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಶ್ರೀ ನೀಲಪ್ಪಗೌಡ ಬಾಳನಗೌಡ್ರ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ನಂತರ ಶಾಲೆಗೆ ಬೇಕಾಗುವ ವಿವಿಧ ಸೌಲಭ್ಯಗಳ ಕುರಿತು ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದು, ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸಲಾಗುವುದೆಂದು ತಿಳಿಸಿದರು.
Kshetra Samachara
12/09/2021 12:05 am