ಧಾರವಾಡ: ಧಾರವಾಡ ಜಿಲ್ಲೆಯ 1165 ಶಾಲೆಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ಇಂದಿನಿಂದ ಆರಂಭಿಸಿದ್ದು, ಮೊದಲ ದಿನ ಶೇ.35 ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಶಾಲೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಜೇಶನ್ ಮಾಡಲಾಗಿದೆ. ಆನ್ ಲೈನ್ ಗಿಂತ ಆಫ್ ಲೈನ್ ಕ್ಲಾಸ್ ಗಳು ಬಹಳ ಅನುಕೂಲ ಆಗಲಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಸ್ವಯಂ ಪ್ರೇರಿತವಾಗಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬಹುದು ಎಂದರು.
Kshetra Samachara
01/01/2021 01:40 pm