ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾಗಮ-2 ಕ್ಕೆ ಚೈತನ್ಯ ತುಂಬಿದ ಅಕ್ಷರಾಭ್ಯಾಸ ಮತ್ತು ಪುಸ್ತಕ ಜೋಳಿಗೆ

ಹುಬ್ಬಳ್ಳಿ: ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಸರಕಾರ‌‌ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಹಲವು ಯೋಜನೆಗಳನ್ನು‌ ಜಾರಿ ಮಾಡಿದೆ. ಇವುಗಳ ಸದುಪಯೋಗ ಪಡೆದುಕೊಳ್ಳಲು ಮಕ್ಕಳನ್ನು ಹೆಚ್ಚಾಗಿ ಸರ್ಕಾರಿ‌ ಶಾಲೆಗೆ ದಾಖಲಿಸಿ. ಮಕ್ಕಳು‌ ಉತ್ತಮ ಹಾಜರಾತಿಯೊಂದಿಗೆ ಗುಣಾತ್ಮಕ ಶಿಕ್ಷಣ ಪಡೆದುಕೊಳ್ಳಬೇಕು. ಈ ಮೂಲಕ ಆದರ್ಶ ಬದುಕು ಕಟ್ಟಿಕೊಳ್ಳಬೇಕೆಂದು ತಾ.ಪಂ.ಇಓ ಗಂಗಾಧರ ಕಂದಕೂರ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಕಟ್ನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ.ಪಂ.ವತಿಯಿಂದ ಆಯೋಜಿಸಲಾದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲೆಗಳಲ್ಲಿ ಸರ್ಕಾರದ ನಿರ್ದೇಶನದಂತೆ

ಕೋವಿಡ್-19 ರ ನಿಯಮಗಳನ್ನು ಪಾಲಿಸಲಾಗಿದೆ. ವಿವಿಧ ಇಲಾಖೆಗಳ ಸಹಕಾರದೊಂದಿಗೆ ಶಾಲಾ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದರು.

ಶಾಲೆಗೆ ಆಗಮಿಸಿದ ಮಕ್ಕಳಿಗೆ ಅಕ್ಕಿಯ ತಟ್ಟೆಯಲ್ಲಿ ಅಕ್ಷರಾಭ್ಯಾಸ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಓದುವ ಬೆಳಕು ಕಾರ್ಯಕ್ರಮದ ಮೂಲಕ ಜೋಳಿಗೆ ಹಿಡಿದು ಸಮುದಾಯದಿಂದ ಪುಸ್ತಕಗಳನ್ನು ಸಂಗ್ರಹಿಸಲಾಯಿತು.

ಜಿ.ಪಂ. ಅಕ್ಷರ ದಾಸೋಹ ಯೋಜನಾಧಿಕಾರಿ ಬಿ.ಎಸ್‌.ಮಾಯಾಚಾರ್‌ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಬಿಸಿಯೂಟದ ಬದಲಾಗಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಮಕ್ಕಳು ಅವುಗಳ ಪ್ರಯೋಜನ ಪಡೆಯಬೇಕೆಂದು ಹೇಳಿದರು.

ತಾ.ಪಂ. ಅಧ್ಯಕ್ಷೆ ಚೆನ್ನಮ್ಮ ಗೊರ್ಲ ರವರು ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ಗಳನ್ನು ನೀಡಿದರು. ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು. ಇಕ್ರಾ ಮತ್ತು ಅಗಸ್ತ್ಯ ಪೌಂಢೇಶ್ ವತಿಯಿಂದ‌ ಮಕ್ಕಳಿಗೆ ಮಾಸ್ಕ್ ವಿತರಿಸಲಾಯಿತು.

Edited By : Nagaraj Tulugeri
Kshetra Samachara

Kshetra Samachara

02/01/2021 12:01 pm

Cinque Terre

14.68 K

Cinque Terre

0

ಸಂಬಂಧಿತ ಸುದ್ದಿ