ಹುಬ್ಬಳ್ಳಿ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ, ವಿಜ್ಞಾನ ಮತ್ತು ಇಂಜಿನಿಯರಿಂಗ್ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ- ಪಿ.ಹೆಚ್.ಡಿ ಶಿಷ್ಯವೇತನ ಯೋಜನೆಯಡಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2020-21 ನೇ ಸಾಲಿನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿಧ್ಯಾರ್ಥಿಗಳು ಶಿಷ್ಯವೇತನ ಪಡೆಯಲು ದಿನಾಂಕ 10/02/2021 ರಂದು ಸಂಜೆ 5 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹದು.
Kshetra Samachara
20/01/2021 05:08 pm