ನವಲಗುಂದ : ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಮುಖ್ಯೋಪಾಧ್ಯಾಯರ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಹಲವು ಸಂಘಟನೆಗಳು ಕೈ ಜೋಡಿಸಿದ್ದು, ಮುಖ್ಯೋಪಾಧ್ಯಾಯರಾದ ಅಭಿದಾ ಬೇಗಂ ಕೋಳೂರ ಅವರನ್ನು ಅಮಾನತ್ತು ಮಾಡಬೇಕು ಎಂದು ತಹಸೀಲ್ದಾರ್ ನವೀನ ಹುಲ್ಲೂರ ಅವರಿಗೆ ಮನವಿಯನ್ನು ನೀಡಿದರು.
ನವಲಗುಂದದ ಸಮತಾ ಸೈನಿಕ ದಳ ಮತ್ತು ಡಾ ಬಿ.ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಸಂಘಟನೆಗಳು ಭಾಗಿಯಾಗಿದ್ದು, ಅಭಿದಾ ಬೇಗಂ ಕೋಳೂರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
Kshetra Samachara
27/01/2021 06:22 pm