ಕುಂದಗೋಳ : ತಾಲೂಕಿನ ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಠಪತಿ ಭೇಟಿ ನೀಡಿ ಲಾಕ್ ಡೌನ್ ಸಡಲಿಕೆ ಬಳಿಕ ಆರಂಭಿಸಿದ ವಿದ್ಯಾಗಮ-2 ಶೈಕ್ಷಣಿಕ ಯೋಜನೆ ಕುರಿತಾಗಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿದರು.
ವಿದ್ಯಾಗಮ-2 ಆರಂಭವಾದಾಗಿನಿಂದ ಶಾಲೆಗಳಲ್ಲಿ ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮಗಳು ಮತ್ತು ಮಕ್ಕಳ ಕಲಿಕೆ ವಿಧಾನದ ವಿಚಾರವಾಗಿ ಶಾಲೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರೊಂದಿಗೆ ಚರ್ಚಿಸಿ, ಮಾಹಿತಿ ಪಡೆದರು.
ಪ್ರತಿದಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ದಿನಚರಿ ಪುಸ್ತಕದಲ್ಲಿ ನಮೂದಿಸುವ ಜತೆಗೆ ಪ್ರತಿ ಪಾಠಗಳಲ್ಲಿನ ಸಾಮರ್ಥ್ಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಚಟುವಟಿಕೆಗಳನ್ನು ನೀಡಬೇಕೆಂದು ಸೂಚಿಸಿದರು.ಈ ಸಂದರ್ಭದಲ್ಲಿ ಸಿ.ಆರ್.ಪಿ ಎಫ್.ಎಸ್.ಕುರಟ್ಟಿ ಹಾಗೂ ಶಿಕ್ಷಕರು ಇದ್ದರು.
Kshetra Samachara
13/02/2021 02:32 pm