ಧಾರವಾಡ: ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರದ ಖಾಸಗಿ ಶಾಲೆಗಳನ್ನೂ ಕೂಡ ಅಂದು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಶಂಕರ ಹಲಗತ್ತಿ ಹೇಳಿದ್ದಾರೆ.
ಖಾಸಗಿ ಶಾಲೆಗಳ ಮೇಲೆ ರಾಜ್ಯ ಸರ್ಕಾರ ತೋರುತ್ತಿರುವ ತಾರತಮ್ಯ ವಿರೋಧಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಶಾಲೆಗಳನ್ನು ಬಂದ್ ಮಾಡಿ ಜಾಥಾ ನಡೆಸಲು ನಿರ್ಧಾರ ಮಾಡಿದ್ದು, ಫೆ. 23 ರಂದು ಬೆಂಗಳೂರಿನಲ್ಲಿ ಕಾಂಪ್ಸ್ ಮತ್ತು ಇತರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.ಧಾರವಾಡದಲ್ಲಿ ನಡೆಯುವ ಪ್ರತಿಭಟನೆಯಿಂದ 100ಕ್ಕೂ ಹೆಚ್ಚು ಖಾಸಗಿ ಶಾಲೆಗಳು ಬಂದ್ ಆಗಲಿವೆ ಎಂದು ಅವರು ತಿಳಿಸಿದ್ದಾರೆ.
Kshetra Samachara
19/02/2021 10:13 pm