ಕಲಘಟಗಿ: ಪದವಿಯ ಕಾಲೇಜಿನ ಒಂದು,ಮೂರು ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದು ಮಾಡುವಂತೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಮಾರ್ಚ ಏಪ್ರಿಲ್ ತಿಂಗಳಲ್ಲಿ ಬೆಸ ಸೆಮಿಸ್ಟರ್ ನಡೆಸುತ್ತಾ ಬಂದಿದೆ.ಆದರೆ ಕರೋನ ಪರಿಸ್ಥಿತಿಯಿಂದ ಕರ್ನಾಟಕ ವಿಶ್ವ ವಿದ್ಯಾಲಯ ಸರಕಾರದ ನಿರ್ದೇಶನದಂತೆ ಪರೀಕ್ಷೆಗಳನ್ನು ಮುಂದೂಡಲಾಯಿತು.
ಈಗ ಕರ್ನಾಟಕ ವಿಶ್ವ ವಿದ್ಯಾಲಯದ ಸಮ ಮತ್ತು ಬೆಸ್ ಸೆಮಿಸ್ಟರ್ ಪರೀಕ್ಷೆಗಳನ್ನು ಒಂದೇ ತಿಂಗಳಿನಲ್ಲಿ ನಡೆಸುವುದು ಎಂದು ಪ್ರಕಟಣೆ ಹೊರಡಿಸಿದೆ. ಇದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡವಾಗಿದೆ.
ಆದ್ದರಿಂದ1, 3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದೇ ಮುಂದಿನ ಸೆಮಿಸ್ಟರ್ ಗೆ ಬಡ್ತಿ ನೀಡಿ ವಿದ್ಯಾರ್ಥಿಗಳ ಹಿತ ಕಾಪಾಡುವಂತೆ ಒತ್ತಾಯಿಸಲಾಯಿತು.
ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ವಿದ್ಯಾರ್ಥಿಗಳು ಕಲಘಟಗಿಗೆ ಆಗಮಿಸಿದ ಸಂದರ್ಭದಲ್ಲಿ ನೀಡಿದರು.
Kshetra Samachara
29/07/2021 03:17 pm