ಧಾರವಾಡ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ಧಾರವಾಡದ ಕುವರಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಧಾರವಾಡದ ಪ್ರಜೆಂಟೇಶನ್ ಸ್ಕೂಲ್‌ನ ನಾಗಲಕ್ಷ್ಮೀ ಅಗಡಿ ಎಂಬ ವಿದ್ಯಾರ್ಥಿನಿಯೇ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದವಳು.
ಪ್ರಸಕ್ತ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿಭಿನ್ನ ರೀತಿಯಲ್ಲಿ ಕೇವಲ ಎರಡು ದಿನ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ನಾಗಲಕ್ಷ್ಮೀ ಎಲ್ಲಾ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ತಮ್ಮ ಮಗಳ ಈ ಸಾಧನೆಗೆ ಪೋಷಕರು ಖುಷಿ ವ್ಯಕ್ತಪಡಿಸಿದ್ದು, ಮಗಳಿಗೆ ಧಾರವಾಡ ಪೇಡಾ ತಿನ್ನಿಸುವ ಮೂಲಕ ಶುಭಾಶಯ ಕೋರಿದ್ದಾರೆ. ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಾಗಲಕ್ಷ್ಮೀಗೆ ಅಭಿನಂದನೆಗಳ ಸುರಿಮಳೆಯೇ ಹರಿದು ಬರುತ್ತಿದ್ದು, ತನ್ನ ಈ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸ್ನೇಹಿತೆಯರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾಳೆ.
Kshetra Samachara
09/08/2021 06:29 pm