ಹುಬ್ಬಳ್ಳಿ: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದರ ಹಿನ್ನೆಲೆಯಲ್ಲಿ, ವಾಣಿಜ್ಯ ನಗರಿ ಹುಬ್ಬಳ್ಳಿಯ ಸೌರವ ವಿ ನಾಯಕ ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.
ಮೊದಲೇ ಕೋವಿಡ್ ಅಲೆಯ ನಡುವೆ ವಿದ್ಯಾರ್ಥಿಗಳು ಆತಂಕದಿಂದಲೇ ಎರಡು ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದೀಗ ಫಲಿತಾಂಶ ಹೊರಬಿದಿದ್ದು, ಹುಬ್ಬಳ್ಳಿಯ ಗೋಕುಲ ರಸ್ತೆಯ, ವಿವೇಕಾನಂದ ನಗರದಲ್ಲಿರುವ ಬೆನಕ ವಿದ್ಯಾಮಂದಿರದ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿ, ಸೌರವ 625 ಕ್ಕೆ 623 ಅಂಕ ಗಳಿಸುವ ಮೂಲಕ ಸಾಧನೆ ಗೈದಿದ್ದಾರೆ. ಈ ಮೂಲಕ ಪಾಲಕರಿಗೂ ಹಾಗೂ ಶಾಲೆಗೂ ಗೌರವ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಇನ್ನೂ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
Kshetra Samachara
09/08/2021 07:38 pm