ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೊರೊನಾ ಸಂಕಷ್ಟ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿ

ಕುಂದಗೋಳ : ಕಳೆದ ಎರೆಡು ವರ್ಷಗಳಿಂದ ಕೊರೊನಾ ಸಂಕಷ್ಟಕ್ಕೆ ಸಿಲುಕಿ ವಿದ್ಯಾರ್ಥಿಗಳು ಜೀವನ ಕಷ್ಟದಲ್ಲಿದೆ ಅದಲ್ಲದೆ ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಕಾಲೇಜು ದಾಖಲಾತಿ ಸಲ್ಲಿಸಲು ಹಣವಿಲ್ಲ ಈ ಪರಿಸ್ಥಿತಿಯನ್ನು ಅರಿತು ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಮೂಲಕ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕುಂದಗೋಳ ಪಟ್ಟಣದ ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ಘೋಷಣೆ ಕೊಡುತ್ತಾ ತಹಶೀಲ್ದಾರ ಕಚೇರಿಗೆ ಆಗಮಿಸಿದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಕಲ್ಪಿಸುವಂತೆ ಮನವಿ ಮಾಡಿದರು, ಈ ಸಂದರ್ಭದಲ್ಲಿ ರಾಷ್ಟ್ರ ಧ್ವಜ ರಾರಾಜಿಸಿದವು.

ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅಲ್ತಾಫ್ ತಳವಾಯಿ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

11/08/2021 09:27 pm

Cinque Terre

26.81 K

Cinque Terre

1

ಸಂಬಂಧಿತ ಸುದ್ದಿ