ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ

ಧಾರವಾಡ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಅತಿಥಿ ಉಪನ್ಯಾಸಕರ ಸಂಘದ ಮುಖಂಡ ಪ್ರೊ.ಹನುಮಂತಗೌಡ ಕಲ್ಮನಿ ಆಗ್ರಹಿಸಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ. ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರ ಪರವಾಗಿ ಪ್ರಮುಖ ಘೋಷಣೆಗಳನ್ನು ಮಾಡಬೇಕು ಎಂದರು.

ಹಲವಾರು ವರ್ಷಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತ ಬಂದಿದ್ದು, ಯುಜಿಸಿ ನಿಯಮಾವಳಿಯಂತೆ ವೇತನ ಹೆಚ್ಚಳ ಮಾಡಬೇಕು, ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು, ವರ್ಷದ ಹನ್ನೆರಡು ತಿಂಗಳೂ ವೇತನ ನೀಡಬೇಕು ಮತ್ತು ಪ್ರಸಕ್ತ 2021-22 ನೇ ಸಾಲಿಗೆ ಸೇವಾ ಅವಧಿಯ ಎಲ್ಲ ಅತಿಥಿ ಉಪನ್ಯಾಸಕರನ್ನು ಮುಂದುವರೆಸಿ ಶೀಘ್ರವೇ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. 2020-21ರಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನೇ ಪ್ರಸಕ್ತ 2021-22 ನೇ ಶೈಕ್ಷಣಿಕ ಸಾಲಿಗೆ ತಕ್ಷಣವೇ ಮುಂದುವರೆಸಬೇಕು ಎಂದು ಅವರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

13/09/2021 01:45 pm

Cinque Terre

38.07 K

Cinque Terre

0

ಸಂಬಂಧಿತ ಸುದ್ದಿ