ಧಾರವಾಡ: ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಸಕ್ರಮಾತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,564 ರಷ್ಟು ಅತಿಥಿ ಉಪನ್ಯಾಸಕರಿದ್ದು, ಅದರಲ್ಲಿ 2500 ರಷ್ಟು ಎಸ್‌ಸಿ, ಎಸ್‌ಟಿ, 2500 ರಷ್ಟು ಮಹಿಳೆಯರು, 300 ರಷ್ಟು ಅಂಗವಿಕಲರು, 7000 ದಷ್ಟು ಓಬಿಸಿ ಹಾಗೂ 2000 ದಷ್ಟು ಸಾಮಾನ್ಯ ವರ್ಗದ ಅತಿಥಿ ಉಪನ್ಯಾಸಕರಿದ್ದಾರೆ. ಯುಜಿಸಿ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರು ಎಲ್ಲಾ ವಿದ್ಯಾರ್ಹತೆ ಹೊಂದಿದವರಿದ್ದು, ಹತ್ತು ಹಲವು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಸತತ ಎರಡು ವರ್ಷಗಳ ಕಾಲ ಕೊರೊನಾ ಸಂಕಷ್ಟದ ಈ ವಿಷಮ ಪರಿಸ್ಥಿತಿಯಲ್ಲಿ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಮಾಡುವುದೇ ಕಠಿಣವಾಗಿದೆ. ಆದ್ದರಿಂದ ಸರ್ಕಾರ ಅತಿಥಿ ಉಪನ್ಯಾಸಕರು ಕಷ್ಟ ಅರ್ಥೈಸಿಕೊಂಡು ಅತಿಥಿ ಉಪನ್ಯಾಸಕರಿಗೆ ಸೇವಾ ಸಕ್ರಮಾತಿ ನೀಡಬೇಕು ಎಂದು ಆಗ್ರಹಿಸಲಾಯಿತು.
Kshetra Samachara
18/09/2021 06:45 pm