ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವರ್ಚುವಲ್ ಮೂಲಕ ನಡೆಯಲಿದೆ ಕವಿವಿ ಘಟಿಕೋತ್ಸವ

ಧಾರವಾಡ: ಕೊರೊನಾದಿಂದ ಬಂದ್ ಆಗಿದ್ದ ಶೈಕ್ಷಣಿಕ ಚಟುವಟಿಕೆಗಳು ಮತ್ತೆ ಪುನರಾರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ 70 ಹಾಗೂ 71ನೇ ಘಟಿಕೋತ್ಸವವನ್ನು ಅಕ್ಟೋಬರ್ 8 ರಂದು ಬೆಳಿಗ್ಗೆ 10-30ಕ್ಕೆ ವರ್ಚುವಲ್ ಮೂಲಕ ನಡೆಸಲಾಗುತ್ತಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕವಿವಿ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವರ್ಚುವಲ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಇಸ್ರೋ ಮಾಜಿ ಅಧ್ಯಕ್ಷ ಪ್ರೊ. ಎ.ಎಸ್.ಕಿರಣಕುಮಾರ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಭಾಗವಹಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ 70ನೇ ಘಟಿಕೋತ್ಸವದ 181 ಹಾಗೂ 71ನೇ ಘಟಿಕೋತ್ಸವದ 130 ಸೇರಿದಂತೆ 311 ಜನರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗುವುದು. ಎರಡು ಘಟಿಕೋತ್ಸವದಲ್ಲಿ ಒಟ್ಟು 8733 ಸ್ನಾತಕೋತ್ತರ ಪದವಿ, 31, 694 ಜನ ಸ್ನಾತಕ ಪದವಿ ಪಡೆಯಲಿದ್ದಾರೆ ಎಂದರು.

ಒಟ್ಟು 451 ಜನ ಚಿನ್ನದ ಪದಕ, 146 ರ‍್ಯಾಂಕ್ ವಿಜೇತರು, 81 ವಿದ್ಯಾರ್ಥಿಗಳಿಗೆ ನಗದು ಬಹುಮಾನ, 147 ಶಿಷ್ಯವೇತನ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಘಟಿಕೋತ್ಸವವನ್ನು ವರ್ಚುವಲ್ ಮೂಲಕ ವೀಕ್ಷಿಸಲು https://www.YouTube.com/c/KaranatakUniversityDharwad ಲಿಂಕ್ ಬಳಸಬಹುದಾಗಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

05/10/2021 09:45 pm

Cinque Terre

49.82 K

Cinque Terre

0

ಸಂಬಂಧಿತ ಸುದ್ದಿ