ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿಕ್ಷಣ ಸಂವರ್ಧನೆಗೆ ಅವ್ವ ಸೇವಾ ಟ್ರಸ್ಟ್‌ನಿಂದ 5 ಲಕ್ಷ ದೇಣಿಗೆ

ಧಾರವಾಡ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಅವ್ವ ಸೇವಾ ಟ್ರಸ್ಟ್, ಪ್ರೌಢ ಶಿಕ್ಷಣ ಸಂವರ್ಧನೆಗಾಗಿ 5 ಲಕ್ಷ ರೂಪಾಯಿಗಳ ದತ್ತಿ ನಿಧಿಯನ್ನು ಧಾರವಾಡದ ಡಯಟ್ ಆವರಣದಲ್ಲಿರುವ ಡಾ.ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನಕ್ಕೆ ದೇಣಿಗೆ ನೀಡಿದೆ.

ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಸಂಲಗ್ನಗೊಂಡಿರುವ ಡಾ.ಎಚ್.ಎಫ್.ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನವು ಕಳೆದ 12 ವರ್ಷಗಳಿಂದಲೂ ವಿವಿಧ ದಾನಿ ಗಣ್ಯರಿಂದ ಸಂಗ್ರಹಿಸಿದ ದತ್ತಿನಿಧಿಯಿಂದಲೇ ಪ್ರೌಢ ಶಿಕ್ಷಣ ಸಂವರ್ಧನೆಗಾಗಿ ವಿಭಿನ್ನ ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ‘ಶಿಕ್ಷಣ ಸಂಪದ’ ಎಂಬ ತ್ರೈಮಾಸಿಕ ಪತ್ರಿಕೆಯನ್ನೂ ಪ್ರಕಟಿಸುತ್ತಿದೆ.

ಅವ್ವ ಸೇವಾ ಟ್ರಸ್ಟ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಷ್ಠಾನದ ಪದಾಧಿಕಾರಿಗಳಿಗೆ 5 ಲಕ್ಷ ರೂಪಾಯಿಗಳ ಚೆಕ್ ನೀಡಿದರು.

ಅವ್ವ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಸಾಲಿ, ಹಿರಿಯ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ, ಡೆಪ್ಯೂಟಿ ಚೆನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನದ ಗೌರವ ನಿರ್ದೇಶಕ ಎಸ್.ಬಿ. ಕೊಡ್ಲಿ, ಶಹರ ಬಿಇಓ ಗಿರೀಶ ಪದಕಿ, ವಿಶ್ರಾಂತ ಪ್ರಾಧ್ಯಾಪಕ ಬಿ.ಎಸ್. ಶಿರೋಳ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ, ಪ್ರಸ್ತುತ ಅವ್ವ ಸೇವಾ ಟ್ರಸ್ಟ್ ಕೊಡಮಾಡಿರುವ 5 ಲಕ್ಷ ರೂಪಾಯಿಗಳನ್ನು ಪ್ರತಿಷ್ಠಾನದಲ್ಲಿ ದತ್ತಿನಿಧಿ ಸ್ಥಾಪಿಸಿ ಬರುವ ಬಡ್ಡಿ ಹಣದಲ್ಲಿ ಪ್ರತಿಷ್ಠಾನದ ಯೋಜನೆಯಂತೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಆಧರಿಸಿರುವ ಜಿಲ್ಲಾ ಮಟ್ಟದ ಶಿಕ್ಷಣ ಪರಿಶ್ರಮ ದಿನೋತ್ಸವಕ್ಕೆ ಬಳಸಿಕೊಂಡು ವಿದ್ಯಾ ವಿಕಾಸದ ಶೈಕ್ಷಣಿಕ ಚಟುವಟಿಕೆ ಕೈಕೊಳ್ಳುವಂತೆ ಹೊರಟ್ಟಿ ಸಲಹೆ ನೀಡಿದರು.

Edited By : PublicNext Desk
Kshetra Samachara

Kshetra Samachara

25/10/2021 09:05 pm

Cinque Terre

10.3 K

Cinque Terre

0

ಸಂಬಂಧಿತ ಸುದ್ದಿ