ಧಾರವಾಡ: ಸಂಖ್ಯಾಶಾಸ್ತ್ರ ಮತ್ತು ಅರ್ಥಶಾಸ್ತ್ರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದಲ್ಲಿಯ ಹೊಸ ಯೋಜನೆಗಳು ಸಂಖ್ಯಾಶಾಸ್ತ್ರದ ಮೇಲೆ ಅವಲಂಭಿತವಾಗಿದೆ. ದಿನನಿತ್ಯ ಜೀವನದ ಜೊತೆಗೆ ಎಲ್ಲಾ ಕ್ಷೇತ್ರದಲ್ಲಿ ನಾವು ಸಂಖ್ಯಾಶಾಸ್ತ್ರವನ್ನು ಅವಲಂಭಿಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಹೆಚ್ಚುವರಿ ನಿರ್ದೇಶಕಿ ಜಯದೇವಿ ಅರಿಕೇರಿಮಠ ಹೇಳಿದರು.
ಧಾರವಾಡದ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನದ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾವಿದ್ಯಾಲಯದ ಸಂಖ್ಯಾಶಾಸ್ತ್ರ ವಿಭಾಗದ ವತಿಯಿಂದ ಕ್ಷೇತ್ರಗಳಲ್ಲಿ ಸಂಖ್ಯಾಶಾಸ್ತ್ರದ ಉಪಯೋಗಗಳು ಎಂಬ ಶೀರ್ಷಿಕೆಯ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಕಾಲೇಜು ಪ್ರಾಚಾರ್ಯ ಡಾ. ಎನ್.ಎಂ.ಮಕಾಂದಾರ ಅಧ್ಯಕ್ಷತೆ ವಹಿಸಿದ್ದರು. ಡಾ.ನಾಗರಾಜ ಗುದಗನವರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
04/12/2021 09:24 pm