ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 10ರಿಂದ ಅತಿಥಿ ಉಪನ್ಯಾಸಕರ ಅಹೋರಾತ್ರಿ ಧರಣಿಗೆ ನಿರ್ಧಾರ: ಕಲ್ಮನಿ

ಹುಬ್ಬಳ್ಳಿ: ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಅಧಿವೇಶನದಲ್ಲಿ ನಿರ್ಣಯಿಸಲು ಸರ್ಕಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಇದೇ 10ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರೋ.ಹನುಮಂತಗೌಡ ಕಲ್ಮನಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತು ಹಲವು ವರ್ಷಗಳಿಂದ ಅತ್ಯಂತ ಕಡಿಮೆ ವೇತನ ಪಡೆದು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಆದರೂ ಕೂಡ ಸರ್ಕಾರ ಯಾವುದೇ ಬೇಡಿಕೆ ಈಡೇರಿಸಿಲ್ಲ. ಆದರೆ ಹುಸಿ ಭರವಸೆಯನ್ನು ನೀಡುತ್ತಿದೆ ಎಂದರು.

ಧಾರವಾಡ ಜಿಲ್ಲೆಯಲ್ಲಿ 478 ಜನ ಅತಿಥಿ ಉಪನ್ಯಾಸಕರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇದುವರೆಗೂ ಹಲವಾರು ಸಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಹೇಳಿದರು.

Edited By : Shivu K
Kshetra Samachara

Kshetra Samachara

08/12/2021 12:51 pm

Cinque Terre

11.27 K

Cinque Terre

0

ಸಂಬಂಧಿತ ಸುದ್ದಿ