ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅವೈಜ್ಞಾನಿಕ ನೀತಿಗಳ ವಿರುದ್ಧ ಹೋರಾಟ ನಡೆಸಿದ್ದಾರೆ. ವಿಧಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸತತ ಆರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸೋಮವಾರ ಬೆಳಿಗ್ಗೆ ಉಪವಾಸ ನಿರತ ವಿದ್ಯಾರ್ಥಿ ಮಹಾಂತೇಶ್ ಚಿಕ್ಕಣ್ಣವರ್ ಅಸ್ವಸ್ಥರಾಗಿದ್ದಾರೆ. ಪೊಲೀಸರು ಕೂಡಲೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರೊಂದಿಗೆ ಬೆಂಬಲವಾಗಿ ಸಾಮಾಜಿಕ ಕಾರ್ಯಕರ್ತ ಸಂತೋಷ್ ನಂದೂರ್ ಕೂಡ ಉಪವಾಸ ಹೋರಾಟ ನಡೆಸುತ್ತಿದ್ದಾರೆ.
ನಿಯಮಿತ ತರಗತಿಗಳನ್ನು ಕೂಡಲೇ ಆರಂಭಿಸಬೇಕು. ಪ್ರತಿ ಸೆಮೆಸ್ಟರ್‌ಗೆ ಆನ್‌ಲೈನ್ ಪರೀಕ್ಷೆ ನಡೆಸಬೇಕು. ಹಾಗೂ ಇತರ ವಿಶ್ವವಿದ್ಯಾಲಯಗಳಂತೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನೇ ಜಾರಿಗೊಳಿಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಾಗಿವೆ.
Kshetra Samachara
13/12/2021 10:44 am