ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ; ಅರ್ಜಿ ಆಹ್ವಾನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತರು www.ssp.postmetric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.bcwd.karnataka.gov.in ಮತ್ತು ದೂರವಾಣಿ ಸಂಖ್ಯೆ: 8050770004, 8050770005, 0836-2447961 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

15/12/2021 10:22 pm

Cinque Terre

2.7 K

Cinque Terre

0

ಸಂಬಂಧಿತ ಸುದ್ದಿ