ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮುನ್ನೆಲೆಗೆ ಬಂದ ಕಾನೂನು ವಿವಿ ವಿದ್ಯಾರ್ಥಿಗಳ ಹೋರಾಟ: ವಿಸಿ ರಾಜೀನಾಮೆ ನೀಡಲಿ

ಹುಬ್ಬಳ್ಳಿ: ಕಾನೂನು ವಿಶ್ವ ವಿದ್ಯಾಲಯದಲ್ಲಿಯೇ ಕಾನೂನು ಪಾಲನೆಯಾಗ್ತಿಲ್ಲವೇ ಎಂಬುವಂತ ಮಾತು ಮತ್ತಷ್ಟು ಮುನ್ನೆಲೆಗೆ ಬಂದಿದೆ. ಪರೀಕ್ಷೆ ಕುರಿತು ಕಾನೂನು ವಿವಿಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಹಾದಿ ಹಿಡಿದಿದ್ದರು. ಆದರೆ ಈಗ ವಿದ್ಯಾರ್ಥಿಗಳು ಮತ್ತೊಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ ತೀರ್ಮಾನ ಕೈಗೊಂಡಿದ್ದಾರೆ.

ಹುಬ್ಬಳ್ಳಿಯ ನವನಗರದಲ್ಲಿರುವ ರಾಜ್ಯ ಕಾನೂನು ವಿವಿಯ ವಿರುದ್ಧ ಸಾವಿರಾರು ವಿದ್ಯಾರ್ಥಿಗಳು ಒಂದು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಆದರೆ ಈ ಒಂದು ಹೋರಾಟಕ್ಕೆ ಕಾನೂನು ವಿಶ್ವ ವಿದ್ಯಾಲಯ ಕ್ಯಾರೆ ಎಂದಿಲ್ಲ. ಇದರಿಂದ ರೋಸಿ ಹೋದ ವಿದ್ಯಾರ್ಥಿಗಳು ಮತ್ತೇ ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ನಾಳೆ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಮತ್ತೊಂದು ಸಮರವನ್ನು ಮಾಡಲಿದ್ದಾರೆ. ಅಲ್ಲದೇ ಪರೀಕ್ಷೆಯ ಬೇಡಿಕೆಯ ಜೊತೆಗೆ ವಿದ್ಯಾರ್ಥಿಗಳು ಕೂಡಲೇ ಕುಲಪತಿ ಈಶ್ವರ ಭಟ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಕುಲಪತಿ ಈಶ್ವರ ಭಟ್ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ವಿದ್ಯಾರ್ಥಿಗಳು ಇಷ್ಟು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಅಲ್ಲದೇ ಸಚಿವರು ಕೂಡ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ತೋರದೇ ಇರುವುದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲು ಕಾರಣವಾಗಿದೆ. ಇಷ್ಟು ದಿನ ಪ್ರತಿಭಟನೆಯಲ್ಲಿ ಸಾಕಷ್ಟು ಅಹಿತಕರ ಘಟನೆಗಳು ಸಂಭವಿಸಿದರೂ‌ ಕೂಡ ಕುಲಪತಿ ಹಾಗೂ ಸಚಿವರು ಎಚ್ಚೆತ್ತುಕೊಳ್ಳದೆ ಇರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಮುಖಂಡರು ಹಾಗೂ ಶಾಸಕರು ಸೇರಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ನಾಳೆ ಹೋರಾಟ ಮುಂದುವರಿಯಲಿದೆ.

Edited By : Shivu K
Kshetra Samachara

Kshetra Samachara

04/01/2022 01:49 pm

Cinque Terre

20.47 K

Cinque Terre

0

ಸಂಬಂಧಿತ ಸುದ್ದಿ