ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಅತಿಥಿ ಉಪನ್ಯಾಸಕರ ಬೆಂಬಲಕ್ಕೆ ಬಂತು ವಿದ್ಯಾರ್ಥಿ ಸಾಗರ

ಕುಂದಗೋಳ : ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿ ಹಾಗೂ ವಿವಿಧ ಬೇಡಿಕೆಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೈಗೊಂಡ ಪ್ರತಿಭಟನೆಗೆ ವಿದ್ಯಾರ್ಥಿ ಸಾಗರವೇ ಹರಿದು ಬಂದು ಬೆಂಬಲ ಕೊಟ್ಟಿದೆ.

ಹೌದು ! ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರು ಕಳೆದ 27 ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡೆತಡೆ ಉಂಟಾಗಿದೆ.

ಈ ಕಾರಣ ಇಂದು ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ತಮ್ಮ ಬೇಡಿಕೆ ಈಡೇರಿಕೆಯ ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಸ್ವಯಂ ಪ್ರೇರಿತವಾಗಿ ಕಾಲೇಜು ವಿದ್ಯಾರ್ಥಿಗಳ ಸಮೂಹವೇ ಬೆಂಬಲ ನೀಡಿ, ಬೇಗ ಶಿಕ್ಷಕರ ಬೇಡಿಕೆ ಈಡೇರಿ ತರಗತಿಗೆ ಬರಲಿ ಎನ್ನುತ್ತಿದ್ದಾರೆ.

ಇನ್ನೂ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಇಲ್ಲದೆ, ಅಲ್ಪ ಸಂಬಳದಲ್ಲೇ ಜೀವನ ನಿರ್ವಹಣೆ ಸಾಕಾದ ಪರಿಣಾಮ ತಮ್ಮ ಅಹವಾಲು ವಿವರಿಸಿ ನ್ಯಾಯ ಕೇಳಿದರು.

ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಜಿಲ್ಲಾ ಕಾಂಗ್ರೆಸ್, ಕರ್ನಾಟಕ ರಕ್ಷಣಾ ವೇದಿಕೆ, ಜೆಡಿಎಸ್ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್, ಅಂತಾರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಹಳೇ ವಿದ್ಯಾರ್ಥಿಗಳು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿ ಅತಿಥಿ ಉಪನ್ಯಾಸಕರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. ಈ ವೇಳೆ ತಮ್ಮ ಮಗುವಿನ ಜೊತೆ ಶಿಕ್ಷಕಿ ಒಬ್ಬರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮಗುವನ್ನು ಸಂತೈಸುವ ನೋಟ ಕಂಡು ಬಂತು.

ಶ್ರೀಧರ ಪೂಜಾರ ಪಬ್ಲಿಕ್ ನೆಕ್ಸ್ಟ್

Edited By : Nagesh Gaonkar
Kshetra Samachara

Kshetra Samachara

05/01/2022 04:33 pm

Cinque Terre

50.73 K

Cinque Terre

0

ಸಂಬಂಧಿತ ಸುದ್ದಿ