ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಅನುದಾನ ನೀಡಲು ಶಿಕ್ಷಕರ ಒತ್ತಾಯ

ಹುಬ್ಬಳ್ಳಿ: ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ, ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿಯ ಅಶೋಕನಗರದ ಸಿ.ಎಂ ನಿವಾಸದ ಎದುರು ಮನವಿ ಪತ್ರ ಸಲ್ಲಿಸಿದ ಅವರು, ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತ ಬರುತ್ತಿವೆ. ಅದರಂತೆ ಸರ್ಕಾರಗಳು ಕೂಡಾ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ನೀಡುತ್ತ ಬಂದಿವೆ. ಆದರೆ 2008ರ ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಿಲ್ಲ. ಇದು ಕನ್ನಡ ಭಾಷೆಗೆ ಮಾಡಿದ ಅವಮಾನವಾಗಿದೆ.

ಅದರಂತೆ ಈ ಹಿಂದೆ ಶಿಕ್ಷಣ ಸಚಿವರಾದ ಸುರೇಶ ಕುಮಾರ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಹಲವಾರು ಸಭೆಗಳನ್ನು ಮಾಡಿ, ಅಂತಿಮವಾಗಿ 2019 ಜ.14 ರಂದು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ 1995 ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅಧಿಕಾರಕ್ಕೆ ಒಳಪಡಿಸಲು ತೀರ್ಮಾನಿಸಿ, ಅಂದಾಜು 250 ಕೋಟಿ ರೂ ಹಣವನ್ನು ಮಂಜೂರಾತಿ ಪ್ರಸ್ತಾವನೆ ಸಲ್ಲಿಸಿದರು. ಆದ್ರೆ ಈವರೆಗೆ ಮಾತ್ರ ಶಾಲಾ ಕಾಲೇಜುಗಳಿಗೆ ಅನುದಾನ ದೊರೆತಿಲ್ಲ. ಹಾಗಾಗಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟದ ಬಿ.ಸಿ.ಶಿವಪ್ಪ, ಜಾಲಮಂಗಲ ನಾಗರಾಜು, ಶೀತಲ್ ಮಾಲಗಾಂವೆ, ಬಿ.ಕುಳ್ಳೇಗೌಡ ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

14/02/2022 12:50 pm

Cinque Terre

54.34 K

Cinque Terre

3

ಸಂಬಂಧಿತ ಸುದ್ದಿ