ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರವಟಗಿಯಲ್ಲಿ ಡಿಸಿ ನಿತೇಶ್ ಪಾಟೀಲ ಗ್ರಾಮ ವಾಸ್ತವ್ಯ

ಧಾರವಾಡ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಫೆಬ್ರುವರಿ ತಿಂಗಳಿನಿಂದ ಪುನರಾರಂಭಿಸಲಾಗಿದ್ದು, ಬರುವ ಫೆ.19 ರಂದು ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳಿಗೆ ನಿಯಮಾನುಸಾರ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾವು ಗ್ರಾಮ ವಾಸ್ತವ್ಯ ಮಾಡಲಿರುವ ಅರವಟಗಿ ಗ್ರಾಮಕ್ಕೆ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಅಳ್ನಾವರ ತಾಲೂಕಿನ ತಾಲೂಕಾಧಿಕಾರಿಗಳು ಖುದ್ದು ಹಾಜರಿರಲು ಅವರು ತಿಳಿಸಿದ್ದಾರೆ. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ದೂರು, ಕುಂದು ಕೊರತೆ, ಮನವಿಗಳ ಕುರಿತು ಸ್ಥಾನಿಕವಾಗಿ ಪರಿಹರಿಸಲು ಕ್ರಮ ವಹಿಸಲಾಗುವುದು. ಅರವಟಗಿ ಗ್ರಾಮದ ಸಾರ್ವಜನಿಕರು ಈ ಹಿಂದೆ ಸಲ್ಲಿಸಿದ್ದ ಅರ್ಜಿಗಳ ಕುರಿತು ಹಾಗೂ ಸ್ಥಳದಲ್ಲಿಯೇ ಅಂದು ತಮ್ಮ ಮನವಿಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಫೆ. 19 ರಂದು ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರ ತಮ್ಮ ತಾಲೂಕಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗ್ರಾಮವಾಸ್ತವ್ಯ ಹೂಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಿದ್ದಾರೆ. ಆದ್ದರಿಂದ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲುಗಳಿಗೆ, ಬೇಡಿಕೆಗಳಿಗೆ ಸ್ಥಳದಲ್ಲಿಯೇ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿ ಸಂಬಂಧಿಸಿದ ಫಲಾನುಭವಿಗಳಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/02/2022 03:17 pm

Cinque Terre

13.1 K

Cinque Terre

2

ಸಂಬಂಧಿತ ಸುದ್ದಿ