ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲರವ

ಕುಂದಗೋಳ : ತಾಲೂಕಿನ ಪಶುಪತಿಹಾಳದ ಸರ್ಕಾರಿ ಕಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಮಹಾಸರಸ್ವತಿ ಪೂಜೆ ಹಾಗೂ 5ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.

ಈ ಪೂಜಾ ಕಾರ್ಯಕ್ರಮವನ್ನು ಶ್ರೀ ಬಸವರಾಜ ಮಹಾಸ್ವಾಮಿಗಳು ರಾಮಲಿಂಗೇಶ್ವರ ಮಠ ಬೆಳ್ಳಟ್ಟಿ ಇವರು ಜ್ಯೋತಿ ಬೆಳಗಿಸಿ ಸರಸ್ವತಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಪೂಜೆಯನ್ನು ನೆರವೇರಿಸಿ

ಬಳಿಕ ಆಶಿರ್ವಚನ ನೀಡಿದರು.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೇದಿಕೆ ಅಭೂತಪೂರ್ವವಾಗಿ ನಡೆದು ನೋಡುಗರನ್ನು ನೋಡುಗರನ್ನು ರಂಜಿಸಿದವು.

ಅಷ್ಟೇ ಅಲ್ಲದೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಮಹನೀಯರಿಗೆ, ನೂತನ ಗ್ರಾಮ ಪಂಚಾಯಿತಿ ಸದಸ್ಯರು, ಯೋಧರಿಗೆ ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

15/03/2022 08:59 pm

Cinque Terre

17.4 K

Cinque Terre

0

ಸಂಬಂಧಿತ ಸುದ್ದಿ