ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾ.28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಧಾರವಾಡ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅನುಕೂಲವಾಗುವ ದೃಷ್ಠಿಯಿಂದ ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಝರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸಲು ನಿರ್ಭಂಧ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ ಪರೀಕ್ಷೆಯ ವೇಳಾಪತ್ರಿಕೆಯ ಅನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯೊಳಗಿನ ಎಲ್ಲ ಝರಾಕ್ಸ್ ಕೇಂದ್ರಗಳು ಆಯಾ ದಿನದ ಬೆಳಗಿನ ಮತ್ತು ಅಪರಾಹ್ನದ ಪರೀಕ್ಷಾ ಅವಧಿಯಲ್ಲಿ ಮಾತ್ರ ಕಾರ್ಯನಿರ್ವಹಿಸದಂತೆ ನಿರ್ಭಂದಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/03/2022 11:48 pm

Cinque Terre

7.82 K

Cinque Terre

1

ಸಂಬಂಧಿತ ಸುದ್ದಿ