ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: "2862 ವಿದ್ಯಾರ್ಥಿಗಳು ಎಸ್ಸೆಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ"

ನವಲಗುಂದ: ಮಾರ್ಚ್ 28 ರಿಂದ ಆರಂಭವಾಗಲಿರುವ ಎಸ್ಸೆಸೆಲ್ಸಿ ಪರೀಕ್ಷೆಯ ಪೂರ್ವಭಾವಿ ಸಭೆ ನವಲಗುಂದ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಎಸ್ . ಮಾಯಾಚಾರ್ಯ ಅವರ ನೇತೃತ್ವದಲ್ಲಿ ಜರುಗಿತು.

ಸಭೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಬಿ.ಎಸ್. ಮಾಯಾಚಾರ್ಯ, ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯ ಸಂಪೂರ್ಣ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ.

ತಾಲ್ಲೂಕಿನ 10 ಪರೀಕ್ಷಾ ಕೇಂದ್ರಗಳಲ್ಲಿ 2862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಹ್ಯಾಂಡ್ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಇನ್ನು, ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಒಂದು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಕೆ, ಪೊಲೀಸ್ ಭದ್ರತೆಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಗೆ ಹಾಜರಾಗಬೇಕು ಎಂದರು.

Edited By : Manjunath H D
Kshetra Samachara

Kshetra Samachara

26/03/2022 09:41 am

Cinque Terre

27.41 K

Cinque Terre

0

ಸಂಬಂಧಿತ ಸುದ್ದಿ