ಧಾರವಾಡ: ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವವು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ರಾಷ್ಟ್ರ ಗೀತೆ ಹಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.
ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಚಾಲನೆ ನೀಡಿದರು. ಈ ವೇಳೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧಿಶರಾದ ಡಾ. ಧನಂಜಯ ಚಂದ್ರಚೂಡ ಅವರು ಆನ್ ಲೈನ್ ಮೂಲಕ ಘಟಿಕೋತ್ಸವದ ಭಾಷಣ ಮಾಡಿದರು.
ತದನಂತರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಮಾತನಾಡಿದರು.
Kshetra Samachara
26/03/2022 04:36 pm