ಹುಬ್ಬಳ್ಳಿ: ರಾಜ್ಯಾದ್ಯಂತ ಮಾರ್ಚ್ 28ರಿಂದ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರೌಢಶಾಲೆಗಳಲ್ಲಿ ಪೂರ್ವಸಿದ್ಧತೆ ನಡೆದಿದೆ.
ಹೌದು..ವಾಣಿಜ್ಯನಗರಿ ಹುಬ್ಬಳ್ಳಿಯ ದಾಜೀಬಾನ್ ಪೇಟೆಯಲ್ಲಿರುವ ದುರ್ಗಾದೇವಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆಸನಕ್ಕೆ ರಿಜಿಸ್ಟರ್ ನಂಬರ ಹಾಕುವ ಮೂಲಕ ಸಕಲ ಸಿದ್ಧತೆಗಳನ್ನು ಮಾಡಲಾಯಿತು.
ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಯಿತು. ಇನ್ನೂ ಶಾಲಾ ಸಿಬ್ಬಂದಿಗಳು ಕೊಠಡಿಗಳನ್ನು ಸ್ವಚ್ಚಗೊಳಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಲಾಯಿತು.
Kshetra Samachara
26/03/2022 09:17 pm