ಧಾರವಾಡ: ರಾಜ್ಯದಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿವೆ. ಧಾರವಾಡದ ಬಾಸೆಲ್ ಮಿಷನ್ ಶಾಲೆಯಲ್ಲಿ ತೆರೆಯಲಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವೀಕ್ಷಿಸಿದರು. ಅಲ್ಲದೇ ಎಷ್ಟೆಷ್ಟು ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂಬುದರ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.
ಧಾರವಾಡ ಜಿಲ್ಲೆಯಲ್ಲಿ ಶೇ.99ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಧಾರವಾಡದ ಯಾವ ಪರೀಕ್ಷಾ ಕೇಂದ್ರದಲ್ಲೂ ಯಾವುದೇ ರೀತಿಯ ತೊಂದರೆ ಆಗಿಲ್ಲ. ಹಿಜಾಬ್ ಕುರಿತೂ ಧಾರವಾಡ ನಗರದಲ್ಲಿ ಎಲ್ಲಿಯೂ ಸಮಸ್ಯೆ ಉಂಟಾಗಿಲ್ಲ ಶಾಂತಿಯುತವಾಗಿ ಪರೀಕ್ಷೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
Kshetra Samachara
28/03/2022 03:30 pm