ಹುಬ್ಬಳ್ಳಿ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದರು.
ಹೌದು. ರಜೆ ಮುಗಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಮುಖ ಮಾಡಿದ್ದು, ಪ್ರತಿ ವರ್ಷಕ್ಕಿಂತ 15 ದಿನಗಳು ಮುಂಚಿತವಾಗಿ ಪುನರ್ ಆರಂಭಗೊಂಡಿರುವ ಶಾಲೆಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಆಗಮಿಸಿದ್ದು ವಿಶೇಷವಾಗಿದೆ.
ಇನ್ನೂ ಹುಬ್ಬಳ್ಳಿಯಲ್ಲಿ ಬಹುತೇಕ ಕಡೆ ಆರಂಭಗೊಂಡಿರುವ ಶಾಲೆಗಳಲ್ಲಿ ಶಿಕ್ಷಕರಿಂದ ಮಕ್ಕಳಿಗೆ ಪ್ರೀತಿಯ ಸ್ವಾಗತ ಕೋರುವ ಮೂಲಕ ಶೈಕ್ಷಣಿಕ ವರ್ಷದ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ.
Kshetra Samachara
16/05/2022 12:22 pm