ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಧಾರವಾಡದ ಹಿರಿಮೆ ಹೆಚ್ಚಿಸಿದ ವಿದ್ಯಾರ್ಥಿಗಳು

ಧಾರವಾಡ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದ್ದು, ಧಾರವಾಡದ ಅನೇಕ ವಿದ್ಯಾರ್ಥಿಗಳು 600ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದು ಧಾರವಾಡದ ಕೀರ್ತಿ ಹೆಚ್ಚಿಸಿದ್ದಾರೆ.

ಅದರಲ್ಲೂ ಧಾರವಾಡ ಕೆ.ಇ.ಬೋರ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಘೋತ್ತಮ ನಾಡಗೌಡರ ಎಂಬ ವಿದ್ಯಾರ್ಥಿ 625ಕ್ಕೆ 624 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ. ತನ್ನ ಈ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ, ಪಾಲಕರ ಬೆಂಬಲವೇ ಕಾರಣ ಎಂದಿದ್ದಾನೆ.

ಇನ್ನು ಧಾರವಾಡ ವಿದ್ಯಾಗಿರಿಯಲ್ಲಿರುವ ಜೆಎಸ್ ಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಿಖಿತಾ ಉಪ್ಪಾರ 625ಕ್ಕೆ 623 ಅಂಕಗಳನ್ನು ಪಡೆದುಕೊಂಡು ಬೇಷ್ ಎನಿಸಿಕೊಂಡಿದ್ದಾಳೆ.

ಕೆಲವೊಂದು ವಿಷಯದಲ್ಲಿ ಈ ವಿದ್ಯಾರ್ಥಿಗಳಿಗೆ ಒಂದು ಹಾಗೂ ಎರಡು ಅಂಕಗಳು ಕಡಿಮೆ ಬಂದಿದ್ದು, ತಮ್ಮ ಸಾಧನೆ ತಮಗೆ ತೃಪ್ತಿ ತಂದಿದೆ ಎನ್ನುತ್ತಾರೆ. ಒಟ್ಟಾರೆಯಾಗಿ ಧಾರವಾಡದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿಸಿ ವಿದ್ಯಾಕಾಶಿಯ ಹಿರಿಮೆ ಹೆಚ್ಚಿಸಿದ್ದಾರೆ.

Edited By : Shivu K
Kshetra Samachara

Kshetra Samachara

19/05/2022 08:10 pm

Cinque Terre

57.02 K

Cinque Terre

12

ಸಂಬಂಧಿತ ಸುದ್ದಿ