ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ʼಜನತಾ ಇಂಗ್ಲಿಷ್‌ ಸ್ಕೂಲ್ʼ

ಕಲಘಟಗಿ: ಸರಕಾರಿ ಶಾಲೆಗಳೆಂದರೆ ಈಗಿನ ಪಾಲಕರಿಗೆ ಅದೆನೋ ತಾತ್ಸಾರ. ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ ಕಲಿತು ಉತ್ತಮ ಅಂಕ ಪಡೆದು ಕೊಳ್ಳಬೇಕು ಎಂಬ ಆಸೆ ಅವರದು.

ಆದರೆ, ಇಲ್ಲೊಂದು ಅನುದಾನಿತ ಸರಕಾರಿ ಶಾಲೆಯು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಪ್ರತಿವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತನ್ನದೇ ಆದ ಸಾಧನೆ ಮಾಡುತ್ತಾ ಬರುತ್ತಿದೆ.

ಹೌದು, ಕಲಘಟಗಿ ಪಟ್ಟಣದಲ್ಲಿರುವ ಜನತಾ ಇಂಗ್ಲಿಷ್ ಸ್ಕೂಲ್ 1954ರಲ್ಲಿ ಆರಂಭಗೊಂಡಿದ್ದು, ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉದ್ಯೋಗ ಮಾಡಿ, ಉನ್ನತ ಸ್ಥಾನಕ್ಕೆ ಏರಿದ್ದಾರೆ. ಇನ್ನೂ ಹಲವರು ನಾನಾ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆ.

ಈ ಬಾರಿಯೂ ಇಲ್ಲಿನ ವಿದ್ಯಾರ್ಥಿಗಳು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯನ್ನು ಕಂಡು ಖಾಸಗಿ ಶಾಲೆಯ ವಿದ್ಯಾರ್ಥಿಗಳೂ ಈ ಶಾಲೆಗೆ ಸೇರ್ಪಡೆಗೊಳ್ಳುತ್ತಿರುವುದು ವಿಶೇಷವಾಗಿದೆ. ಶಾಲೆಯ ಸಾಧನೆಗೆ ಖುಷಿಗೊಂಡಿರುವ ಸಾರ್ವಜನಿಕರು, ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Edited By : Somashekar
Kshetra Samachara

Kshetra Samachara

23/05/2022 10:53 pm

Cinque Terre

53.38 K

Cinque Terre

5

ಸಂಬಂಧಿತ ಸುದ್ದಿ